ಇಂಗ್ಲೆಂಡ್‌ನ ಅನುಭವಿ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ಹೆಸರಲ್ಲಿದ್ದ ವಿಶ್ವದಾಖಲೆಯನ್ನು ಮುರಿದು ನೂತನ ಇತಿಹಾಸ ಸೃಷ್ಟಿಸಿದ್ದಾರೆ.

ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲು ತಲುಪುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸ್ವದೇಶದ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ವಿಶ್ವದ ನಂಬರ್ ಒನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ, ಆಸ್ಟ್ರೇಲಿಯಾದ ದಂತಕಥೆ ರಿಕಿ ಪಾಂಟಿಂಗ್ ಅವರ ಹೆಸರಲ್ಲಿದ್ದ ಬಹುದಿನಗಳ ವಿಶ್ವದಾಖಲೆಯನ್ನು ಧೂಳಿಪಟ ಮಾಡಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ರೂಟ್, ಈ ಮಹತ್ವದ ಸಾಧನೆ ಮಾಡಿದರು. ರಿಕಿ ಪಾಂಟಿಂಗ್…

root 1 2

ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅಭೂತಪೂರ್ವ ಮೈಲಿಗಲ್ಲು ತಲುಪುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸ್ವದೇಶದ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ವಿಶ್ವದ ನಂಬರ್ ಒನ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ, ಆಸ್ಟ್ರೇಲಿಯಾದ ದಂತಕಥೆ ರಿಕಿ ಪಾಂಟಿಂಗ್ ಅವರ ಹೆಸರಲ್ಲಿದ್ದ ಬಹುದಿನಗಳ ವಿಶ್ವದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.

restaurant, paris, france, bistro, cafe, coffee, europe, french, table, wine, city, urban, drink, sidewalk, dinner, restaurant, restaurant, restaurant, paris, paris, paris, cafe, cafe, cafe, cafe, cafe

ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದ ವೇಳೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ರೂಟ್, ಈ ಮಹತ್ವದ ಸಾಧನೆ ಮಾಡಿದರು. ರಿಕಿ ಪಾಂಟಿಂಗ್ ಆಸ್ಟ್ರೇಲಿಯಾದಲ್ಲಿ ಆಡಿದ ಟೆಸ್ಟ್ ಪಂದ್ಯಗಳಿಂದ ಒಟ್ಟು 7,578 ರನ್ ಗಳಿಸಿ ಇಷ್ಟು ವರ್ಷಗಳ ಕಾಲ ಅಗ್ರಸ್ಥಾನದಲ್ಲಿದ್ದರು. ಇದೀಗ ಇಂಗ್ಲೆಂಡ್ ನೆಲದಲ್ಲಿ 7,594 ರನ್‌ಗಳ ಗಡಿ ದಾಟುವ ಮೂಲಕ ರೂಟ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

Vertical shot of various posters on an urban wall, emphasizing street advertisement.

ಈ ಸಾಧನೆಯೊಂದಿಗೆ ಜೋ ರೂಟ್ ಕ್ರಿಕೆಟ್ ಜಗತ್ತಿನ ದಿಗ್ಗಜರನ್ನೂ ಹಿಂದಿಕ್ಕಿದ್ದಾರೆ. ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಭಾರತದಲ್ಲಿ 7,216 ರನ್ ಗಳಿಸಿದ್ದರೆ, ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಸ್ವದೇಶದಲ್ಲಿ 7,167 ರನ್ ಹಾಗೂ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಜಾಕ್ ಕಾಲಿಸ್ 7,035 ರನ್ ಕಲೆಹಾಕಿದ್ದಾರೆ. ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ರೂಟ್, ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಳ್ಳುತ್ತಿದ್ದಾರೆ.

images2
portrait ad 4
banner ad

Previous Post

Next Post

Leave a Reply

Your email address will not be published. Required fields are marked *